ಹೈದರಾಬಾದ್, ಸೆ 15 (DaijiworldNews/DB): ಅಪ್ರಾಪ್ತ ಬಾಲಕಿಯನ್ನು ಯುವಕರಿಬ್ಬರು ಅಪಹರಿಸಿ ಎರಡು ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸೋಮವಾರ ಘಟನೆ ನಡೆದಿದ್ದು, ಬಾಲಕಿಯ ತಂದೆ ದಬೀರ್ ಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಘಟನೆ ಬೆಳಕಿಗೆ ಬಂದಿದೆ.
ಇಬ್ಬರೂ ಬಾಲಕಿಯನ್ನು ನಾಂಪಲ್ಲಿಯ ಲಾಡ್ಜ್ ಗೆ ಕರೆದೊಯ್ದು ಅಲ್ಲಿ ಎರಡು ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಲೈಂಗಿಕ ದೌರ್ಜನ್ಯ ದ ಬಳಿಕ ಬಾಲಕಿಯನ್ನು ಚಾದರ್ಘಾಟ್ ನಲ್ಲಿ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.
ಬಾಲಕಿ ಮನೆಗೆ ಹೋದ ಬಳಿಕ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಇದರಿಂದ ಆತಂಕಿತರಾದ ಪೋಷಕರು ಪೊಲಿಸ್ ದೂರು ನೀಡಿದ್ದಾರೆ.
ದೂರು ಆಧರಿಸಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.