ನವದೆಹಲಿ, ಸೆ 16 (DaijiworldNews/HR): ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಇಂದು ಮಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ಕಾರ್ಯ ನಡೆಸಿದೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ಇಡಿಯು ದೆಹಲಿ ಸೇರಿದಂತೆ 35 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದು, ಇಂದು ಮಂಗಳೂರು, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ಸೇರಿದಂತೆ ದೇಶದ 40 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಇನ್ನು ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರ ಜಾರಿಗೊಳಿಸಿದ ನೂತನ ಮದ್ಯ ನೀತಿಯ ಕರಡು ತಯಾರಿಕೆಯಲ್ಲಿ ಭಾಗಿಯಾದ ತಯಾರಕರು ಮತ್ತು ಮದ್ಯ ವ್ಯಾಪಾರದಲ್ಲಿ ತೊಡಗಿರುವವರ ಕಚೇರಿ, ಶಾಪ್ ಗಳ ಮೇಲೆ ದಾಳಿ ನಡೆದಿತ್ತು.