ಒಡಿಶಾ, ಸೆ 17 (DaijiworldNews/DB): ಕಲ್ಲಿದ್ದಲು ತುಂಬಿದ ಟ್ರಕ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟ ಘಟನೆ ಒಡಿಶಾದ ಝಾರ್ಸುಗುಡಲ್ಲಿ ನಡೆದಿದೆ.
ಸಂಬಲ್ಪುರ-ಜಾರ್ಸುಗುಡ ಬಿಜು ಎಕ್ಸ್ಪ್ರೆಸ್ವೇನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯ ನೌಕರು ಕೆಲಸ ಮುಗಿಸಿ ಹಿಂತಿರುಗುತ್ತಿದ್ದರು. ಈ ವೇಳೆ ಝಾರ್ಸುಗುಡ ಬೈಪಾಸ್ ರಸ್ತೆಯ ಪವರ್ ಹೌಸ್ ಚಾಕ್ ಬಳಿ ಕಲ್ಲಿದ್ದಲು ತುಂಬಿದ ಟ್ರಕ್ ಬರುತ್ತಿತ್ತು. ಬಸ್ ಸನಿಹಕ್ಕೆ ತಲುಪುವಾಗಿ ಟ್ರಕ್ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.