ಬೆಂಗಳೂರು, ಸೆ 17 (DaijiworldNews/HR): ಬೆಂಗಳೂರಿನಲ್ಲಿ ಸ್ಥಗಿತ ಗೊಳಿಸಲಾದ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ, ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ ವಾಗಿಲ್ಲ ಎಂದಿದ್ದಾರೆ.
ಇನ್ನು ಸಾರ್ವಜನಿಕರಿಂದ, ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಇರುವ ಹಿನ್ನೆಲೆಯಲ್ಲಿ, ಸ್ಥಗಿತಗೊಳಿ ಸಲಾಗಿದ್ದು, ಈಗ ಮತ್ತೆ ಜಾರಿಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.