ನವದೆಹಲಿ, ಸೆ 17 (DaijiworldNews/HR): ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಬಂಧಿಸಿರುವುದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜಿಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೊದಲು ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ್ದು, ಪದೇ ಪದೇ ನ್ಯಾಯಾಲಯಕ್ಕೆ ಮನವಿ ಮಾಡಿದರೂ ಯಾವುದೇ ಸಾಕ್ಷ್ಯವನ್ನು ಮಂಡಿಸಲು ಸಾಧ್ಯವಾಗುತ್ತಿಲ್ಲ. ನಂತರ ಮನೀಶ್ ಮನೆ ಮೇಲೆ ದಾಳಿ ನಡೆಸಿದರೂ ಏನೂ ಪತ್ತೆಯಾಗಿಲ್ಲ. ಈಗ ಅಮಾನತುಲ್ಲಾ ಅವರನ್ನು ಬಂಧಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಶಾಸಕ ಅಮಾನತುಲ್ಲಾ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಮತ್ತು ಪಕ್ಷಕ್ಕೆ ಮಾನಹಾನಿ ಮಾಡುವ ಸಂಚು ಎಂದಿದ್ದಾರೆ.
ಅಮಾನತುಲ್ಲಾ ಖಾನ್ ಅವರ ಆಪ್ತ ಸಹಾಯಕ ಮತ್ತು ವ್ಯಾಪಾರ ಪಾಲುದಾರ ಹಮೀದ್ ಅಲಿಯನ್ನು ಕೂಡ ಇಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ.