ನವದೆಹಲಿ, ಸೆ 17 (DaijiworldNews/HR): ರಾಷ್ಟ್ರೀಯ ಸಮಸ್ಯೆಗಳು ಮತ್ತು 'ಭಾರತ್ ಜೋಡೊ ಯಾತ್ರೆ'ಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕಾಗಿ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ನಮೀಬಿಯಾದಿಂದ ಕರೆತರಲಾಗಿದ್ದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಬಿಡುಗಡೆ ಮಾಡಿದ್ದನ್ನು ಕಾಂಗ್ರೆಸ್ 'ತಮಾಷೆ'ಎಂದಿದೆ.
ಇನ್ನು '2008-09ರಲ್ಲಿ 'ಚೀತಾ ಯೋಜನೆ' ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿತ್ತು. ಮನಮೋಹನ್ ಸಿಂಗ್ ಸರ್ಕಾರ ಅದಕ್ಕೆ ಅನುಮೋದನೆ ನೀಡಿತ್ತು ಈ ಸಂಬಂಧ 2010ರ ಏಪ್ರಿಲ್ನಲ್ಲಿ ದಕ್ಷಿಣ ಆಫ್ರಿಕಾದ ಕೇಪ್ಟೌನ್ ಚೀತಾ ಔಟ್ರೀಷ್ ಸೆಂಟರ್ಗೆ ಭೇಟಿ ನೀಡಿದ್ದೆ ಎಂದು ಚಿತ್ರ ಸಹಿತ ಅಂದಿನ ಪರಿಸರ ಮತ್ತು ಅರಣ್ಯ ಸಚಿವ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.