ನವದೆಹಲಿ, ಸೆ 17 (DaijiworldNews/HR): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಂದು ಲಂಡನ್ಗೆ ತೆರಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರಪತಿ ಭವನ, ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ ಎಂದಿದೆ.
ಬ್ರಿಟನ್ನ ರಾಣಿ 2ನೇ ಎಲಿಜಬೆತ್ ಸೆ.8ರಂದು ಮೃತಪಟ್ಟಿದ್ದು, ಲಂಡನ್ನ ವೆಸ್ಟ್ಮಿನ್ಸ್ಟರ್ ಅಬೆನಲ್ಲಿ ಸೆ.19ರಂದು ಅವರ ಅಂತ್ಯಸಂಸ್ಕಾರ ನಡೆಯಲಿದೆ.