ರಾಂಚಿ, ಸೆ 18 (DaijiworldNews/HR): ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಸೇತುವೆಯಿಂದ ನದಿಗೆ ಬಿದ್ದಿದ್ದು, ಈ ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಗಿರಿದಿಹ್ ಜಿಲ್ಲೆಯಿಂದ ರಾಂಚಿಗೆ ತೆರಳುತ್ತಿದ್ದ ಬಸ್ ಸೇತುವೆಯ ತಡೆಗೋಡೆ ಕುಸಿದ ಪರಿಣಾಮ ಸಿವಾನ್ನೆ ನದಿಯ ಒಣ ಪ್ರದೇಶದಲ್ಲಿ ಬಿದ್ದಿದ್ದು, ಕೆಲವು ಪ್ರಯಾಣಿಕರು ಬಸ್ನಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಜಾರಿಬಾಗ್ನ ಸದರ್ ಆಸ್ಪತ್ರೆಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ. ಉಳಿವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.