ಬೆಂಗಳೂರು, ಸೆ 18 (DaijiworldNews/HR): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಸ್.ವಿಜಯೇಂದ್ರ ಸೇರಿದಂತೆ 9 ಮಂದಿ ವಿರುದ್ಧ ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಂಬಂಧ ಲಂಚ ಪಡೆದ ಆರೋಪದ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಡಿಯೂರಪ್ಪ, ಬಿ.ಎಸ್.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಮ್, ಶಾಸಕ ಎಸ್.ಟಿ. ಸೋಮಶೇಖರ್, ರೀಜಿನಲ್ ಕಮೀಷನರ್ ಡಾ.ಜಿ.ಸಿ.ಪ್ರಕಾಶ್, ಕೆ.ರವಿ. ವಿರೂಪಾಕ್ಷ ಯಮಕನಮರಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪೆನಿಗೆ ಬಿಡಿಎ ವಸತಿ ಯೋಜನೆಗೆ ಸಂಬಂಧಿಸಿದಂತೆ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ಅಬ್ರಹಾಂ ಅವರ ದೂರಿನ ಅನ್ವಯ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದ್ದು,ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.