ಬೆಂಗಳೂರು, ಸೆ 18 (DaijiworldNews/SM): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಹಲವು ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಕಳೆದ ಬುಧವಾರ ಆದೇಶಿಸಿತ್ತು.