ನವದೆಹಲಿ, ಸೆ 19 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಅವರು ವಿಚಾರಣೆಗಾಗಿ ನವದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ.
ಶಿವಕುಮಾರ್ ಅವರ ವಿರುದ್ಧ ಸಿಬಿಐ ಅಕ್ರಮ ಆಸ್ತಿ ಹೊಂದಿರುವ ಆರೋಪದ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಇಡಿ ಕಳೆದ ವಾರ ಸಮನ್ಸ್ ಜಾರಿ ಮಾಡಿತ್ತು.
ಇನ್ನು ಈ ವರ್ಷದ ಮೇ ತಿಂಗಳಲ್ಲಿ ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಡಿಕೆಶಿಗೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದು, ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದಾರೆ.