ನವದೆಹಲಿ, ಸೆ 19 (DaijiworldNews/HR): ಭಾರತ್ ಜೋಡೊ ಯಾತ್ರೆಯ ಯಶಸ್ಸು ನೋಡಿ ಬಿಜೆಪಿ ದಂಗಾಗಿದ್ದು, ಯಾತ್ರೆ ವಿರುದ್ಧ ಬಿಜೆಪಿ ಅಪಪ್ರಚಾರ ಹಬ್ಬಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್, ಭಾರತ್ ಜೋಡೊ ಯಾತ್ರೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರುವ ಭೀತಿ ಬಿಜೆಪಿ ನಾಯಕರಲ್ಲಿ ಪ್ರತಿಫಲಿಸುತ್ತಿದೆ ಎಂದರು.
ಇನ್ನು ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಅವರಿಗೆ ಭಾರತ್ ಜೋಡೊ ಯಾತ್ರೆಯಲ್ಲಿ ಜನರಿಂದ ಉತ್ತಮ ಪ್ರೀತಿ, ಬೆಂಬಲ ದೊರಕುತ್ತಿದ್ದು, ಈ ಬಗ್ಗೆ ಬಿಜೆಪಿ ಉನ್ನತ ಮಟ್ಟದ ನಾಯಕರಲ್ಲಿ ಅಸಮಾಧಾನವಿದೆ ಎಂದು ಹೇಳಿದ್ದಾರೆ.