ಪಂಜಾಬ್, ಸೆ 19 (DaijiworldNews/HR): ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು, ತಮ್ಮ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್ಸಿ) ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ.
ಕಾಂಗ್ರೆಸ್ನಿಂದ ಅನೌಪಚಾರಿಕವಾಗಿ ನಿರ್ಗಮಿಸಿದ 10 ತಿಂಗಳ ನಂತರ ಅಮರಿಂದರ್ ಸಿಂಗ್ ಅವರು ಸೋಮವಾರ ನವದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇನ್ನು ಕಳೆದ ವರ್ಷ ನವೆಂಬರ್ನಲ್ಲಿ ಆಗಿನ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಧು ಅವರೊಂದಿಗಿನ ಅಧಿಕಾರದ ಕಲಹದ ನಡುವೆ ಕಾಂಗ್ರೆಸ್ ತೊರೆದು, ಪಂಜಾಬ್ ಲೋಕ ಕಾಂಗ್ರೆಸ್(ಪಿಎಲ್ಸಿ) ಎಂಬ ಹೊಸ ಪಕ್ಷ ಸ್ಥಾಪಿಸಿದ್ದು, ಇದೀಗ ಪಿಎಲ್ಸಿ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ.