ಮುಂಬೈ, ಸೆ 19 (DaijiworldNews/HR): ಮುಂಬೈನ ಬೋರಿವಲಿ ಪ್ರದೇಶದಲ್ಲಿ ಯುವಕನೊಬ್ಬ ತಲ್ವಾರ್ನಿಂದ ಕೇಕ್ ಕತ್ತರಿಸಿದ್ದು, ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಯುವಕ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ವೇಳೆ ಕತ್ತಿಯಿಂದ 21 ಕೇಕ್ಗಳನ್ನು ಕತ್ತರಿಸುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ಇನ್ನು ಆರೋಪಿ ಪರಾರಿಯಾಗಿದ್ದು, ಯುವಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.