ಬೆಂಗಳೂರು, ಸೆ 20 (DaijiworldNews/HR): ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆಯೂ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಸಮಯದಲ್ಲಿ ಜೆಡಿಎಸ್ನ ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ಈ ವರ್ಷ ನೂರು ಪಿಎಚ್ಸಿಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗುವುದು. ಜೊತೆಗೆ ಪಿಎಚ್ಸಿಗಳ ಸೇವೆ ದಿನ ವಿಡೀ ಲಭ್ಯವಾಗುವಂತೆ ಮಾಡಲಾಗುವುದು ಎಂದಿದ್ದಾರೆ.
ಇನ್ನು ದೂರುಗಳನ್ನು ಆಲಿಸಿ ನಿಗದಿತ ಅವಧಿಯಲ್ಲಿ ಪರಿಹರಿಸಲೂ ವ್ಯವಸ್ಥೆ ಕಲ್ಪಿಸಲಾಗಿದ್ದು, ಜನಸಂಖ್ಯೆಗೆ ಅನುಗುಣವಾಗಿ ಪಿಎಚ್ಸಿ ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.