ರಾಜಸ್ಥಾನ, ಸೆ 20 (DaijiworldNews/HR): ಜ್ಞಾನವಾಪಿ ಮಸೀದಿ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ರಾಜಸ್ಥಾನದ ಮಹಿಳೆಯೊಬ್ಬರಿಗೆ ಶಿರಚ್ಛೇದನ ಬೆದರಿಕೆ ಪತ್ರ ಬಂದಿರುವ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸದರ್ ಪೊಲೀಸ್ ಠಾಣೆಯ ಠಾಣಾಧಿಕಾರಿ, ಅಲ್ವಾರ್ನಲ್ಲಿ ಮಹಿಳೆಯೊಬ್ಬರು ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದರಿಂದಾಗಿ ಅವರು ಬೆದರಿಕೆ ಪತ್ರವನ್ನು ಸ್ವೀಕರಿಸಿದ್ದಾರೆ. ಬೆದರಿಕೆ ಪತ್ರ ಎಲ್ಲಿಂದ ಬಂದಿದೆ? ಯಾರು ಕಳಿಸಿದ್ದಾರೆ? ಎಂದು ತನಿಖೆ ಮಾಡಲಾಗುತ್ತಿದೆ ಎಂದರು.
ಇನ್ನು ಬೆದರಿಕೆ ಪತ್ರ ಸ್ವೀಕರಿಸಿದ ಮಹಿಳೆ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದು, ಆಕೆಗೆ ತಲೆ ಕಡಿದು ಹಾಕುವುದಾಗಿ ಬರೆದಿರುವ ಪತ್ರ ಬಂದಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದಿದ್ದಾರೆ.