ಶಿವಮೊಗ್ಗ, ಸೆ 20 (DaijiworldNews/HR): ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಇಬ್ಬರನ್ನು ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ ಬಂಧಿಸಿದ್ದು, ಮತ್ತೋರ್ವನಿಗಾಗಿ ಶೋಧ ನಡೆಸಿದೆ.
ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವವರನ್ನು ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ಶಾರೀಕ್ ಮತ್ತು ಆತನ ಸಹಚರರಾದ ಮಾಜ್ ಮುನೀರ್ ಅಹಮ್ಮದ್ ಹಾಗೂ ಸಯ್ಯದ್ ಯಾಸೀನ್ ಎಂದು ಗುರುತಿಸಲಾಗಿದ್ದು ಅವರ ವಿರುದ್ದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಇನ್ನು ಕೇಸು ದಾಖಲಿಸಿಕೊಂಡಿರುವ ಪೊಲೀಸರು ಮಾಜ್ ಮುನೀರ್ ಅಹಮ್ಮದ್, ಸಯ್ಯದ್ ಯಾಸೀನ್ ಇಬ್ಬರನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.