ಸಹರಾನ್ಪುರ (ಉತ್ತರ ಪ್ರದೇಶ), ಸೆ 21 (DaijiworldNews/DB): ಶಾಲಾ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸಹರಾನ್ಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ.
40 ವರ್ಷದ ಹಾಗು ಶಿಕ್ಷಕ ಹಾಗೂ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ 17 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಇಬ್ಬರೂ ಸೆಪ್ಟೆಂಬರ್ 3ರಿಂದ ನಾಪತ್ತೆಯಾಗಿದ್ದರು. ಬಾಲಕಿಯನ್ನು ಅಪಹರಿಸಲಾಗಿದೆ ಎಂದು ಆಕೆಯ ಕುಟುಂಬ ದೂರು ದಾಖಲಿಸಿತ್ತು. ಬಳಿಕ ಹುಡುಕಾಟ ಆರಂಭಿಸಿದಾಗ ಸಹರಾನ್ಪುರದ ಅರಣ್ಯವೊಂದರಲ್ಲಿ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹುಡುಕಾಡಿದಾಗ ಒಂದೇ ಸ್ಥಳದಲ್ಲಿ ಇಬ್ಬರ ಶವ ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಟಾಡಾ ತಿಳಿಸಿರುವುದಾಗಿ ವರದಿಯಾಗಿದೆ.
ಮೃತದೇಹಗಳನ್ನು ಪರಿಶೀಲಿಸಿದಾಗ ಸುಮಾರು ಹತ್ತು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಲ್ಲೇ ಇದ್ದ ಬೈಕೊಂದನ್ನು ವಶಪಡಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಶಿಕ್ಷಕ ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ಬಾಲಕಿ ಓದುತ್ತಿದ್ದಳು. ಇಬ್ಬರ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗುತ್ತಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.