ಕಾಶ್ಮೀರ, ಸೆ 22 (DaijiworldNews/HR): ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನೂ ವಶಪಡಿಸಿಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ನಡೆದಿದೆ.
ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬುಧವಾರ ಈ ಬಂಧನಗಳು ನಡೆದಿವೆ.
ಇನ್ನು ಹತ್ಯೆಯಾದ ಇಬ್ಬರು ಭಯೋತ್ಪಾದಕರು ಅಗುಹ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.