ನವದೆಹಲಿ, ಸೆ 22 (DaijiworldNews/HR): ದೇಶದಾದ್ಯಂತ ಪಿಎಫ್ಐ, ಎಸ್ಡಿಪಿಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಗುರುವಾರ ದಾಳಿ ನಡೆಸಿದ್ದು, ಅನೇಕ ಮಂದಿ ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ.
ದಕ್ಷಿಣ ಭಾರತದಲ್ಲಿ ನಡೆಯುತ್ತಿರುವ ಈ ದಾಳಿಗಳನ್ನು ಎನ್ಐಎ ಅತಿದೊಡ್ಡ ತನಿಖಾ ಪ್ರಕ್ರಿಯೆ ಎಂದು ಕರೆದಿದೆ.
ಇನ್ನು ಭಯೋತ್ಪಾದನೆ ನಿಧಿ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಘಟನೆಗಳಿಗೆ ಸೇರಲು ಜನರನ್ನು ಆಮೂಲಾಗ್ರವಾಗಿ ರೂಪಿಸುವಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳ ವಿರುದ್ಧ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದೆ.