ನವದೆಹಲಿ, ಸೆ 22 (DaijiworldNews/HR): ಸುಪ್ರೀಂಕೋರ್ಟ್ನಲ್ಲಿ ಹಿಜಾಬ್ ವಿಚಾರವಾಗಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಅಂತ್ಯವಾಗಿದ್ದು, ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಹಿಜಾಬ್ ಕುರಿತ ತೀರ್ಪನ್ನು ಕಾಯ್ದಿರಿಸಿದೆ ಎಂದು ತಿಳಿದು ಬಂದಿದೆ.
ವಿದ್ಯಾಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದೆ.
ಇನ್ನು ಹಿಜಾಬ್ ವಿವಾದದ ಕುರಿತು 10 ದಿನಗಳ ಕಾಲ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಇಂದು ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ.