ಬರೇಲಿ (ಉತ್ತರ ಪ್ರದೇಶ), ಸೆ 22 (DaijiworldNews/DB): ಗರ್ಭಿಣಿ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದರಿಂದ ಆಕೆಗೆ ಗರ್ಭಪಾತವಾಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ಬರೇಲಿಯಲ್ಲಿ ನಡೆದಿದೆ.
ಮೂರು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಸೆಪ್ಟೆಂಬರ್ 13ರಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೂವರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದರಿಂದ ಆಕೆಗೆ ಗರ್ಭಪಾತವಾಗಿದ್ದು, ಸದ್ಯ ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.
ಸಂತ್ರಸ್ತೆಯ ಪತಿ ಸೆಪ್ಟೆಂಬರ್ 16ರಂದು ಬರೇಲಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದಕ್ಕೂ ಮೊದಲು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿಗಳ ವಿರುದ್ದ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.