ನವದೆಹಲಿ,ಸೆ 22 (DaijiworldNews/HR): ಸ್ಪೈಸ್ ಜೆಟ್ ವಿಮಾನದೊಳಗೆ ಯೂಟ್ಯೂಬರ್ ಬಾಬಿ ಕಟಾರಿಯಾ ಧೂಮಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಅವರಿಗೆ ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಬಾಬಿ ಕಟಾರಿಯಾ ವಿರುದ್ಧ ಈ ಹಿಂದೆ ದೆಹಲಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿತ್ತು, ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ಸಿಗರೇಟ್ ಸೇದುತ್ತಿರುವುದನ್ನು ನೋಡಿದ ನಂತರ ಪೊಲೀಸರು ಪತ್ತೆಹಚ್ಚಿದ್ದಾರೆ.
ಇನ್ನು ವಿಮಾನ ನಿಲ್ದಾಣದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ತನು ಶರ್ಮಾ ಅವರು ಮಾತನಾಡಿ, ಕಟಾರಿಯಾ ಅವರ ವಿರುದ್ಧ ಪ್ರಕರಣ ದಾಖಲಾದಾಗಿನಿಂದ ಪರಾರಿಯಾಗಿದ್ದಾರೆ ಎಂದು ಹೇಳಿದರು.