ಉತ್ತರ ಪ್ರದೇಶ, ಸೆ 23 (DaijiworldNews/HR): ಉತ್ತರ ಪ್ರದೇಶದ ಉನ್ನಾವೋದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 11 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಮೂವರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಬಾಲಕಿಗಾಗಲಿ ಅಥವಾ ಆಕೆಯ ಪೋಷಕರಿಗಾಗಲಿ ಗರ್ಭಿಣಿ ಎಂಬ ವಿಚಾರವೇ ಅರಿವಾಗಿರಲಿಲ್ಲ ಎನ್ನಲಾಗಿದೆ.
ಇನ್ನು ಬ್ವಾಲಕಿಗೆ ಹೊಟ್ಟೆ ನೋವು ಎಂಬ ಕಾರಣಕ್ಕೆ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಈಗ ಆರೋಗ್ಯವಾಗಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಪೋಸ್ಕೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.