ನವದೆಹಲಿ, ಸೆ 23 (DaijiworldNews/HR): ಗಾಂಧಿ ಕುಟುಂಬದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ ಎಂಬುದಾಗಿ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ವೇಳೆ ಗಾಂಧಿ ಕುಟುಂಬದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.
ಇನ್ನು ರಾಹುಲ್ ಅವರು ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಆದರೆ ಅವರು ಗಾಂಧಿ ಕುಟುಂಬದ ಯಾರೂ ಕಾಂಗ್ರೆಸ್ ಪಕ್ಷದ ಮುಂದಿನ ಮುಖ್ಯಸ್ಥರಾಗಬಾರದು ಎಂದು ಅವರು ನಿರ್ಧರಿಸಿರುವುದನ್ನು ನನಗೆ ತಿಳಿಸಿದರು ಎಂದಿದ್ದಾರೆ.