ಕೇರಳ, ಸೆ 23 (DaijiworldNews/HR): ಎನ್ಐಎ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಘೋಷಿಸಿದ ಹರತಾಳ ಹಾಗೂ ರಾಜ್ಯದಲ್ಲಿ ನಡೆದ ಹಿಂಸಾಚಾರದ ಘಟನೆಗಳ ಬಗ್ಗೆ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ.
ಈ ಹಿಂದೆ ಹರತಾಳವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕ ಆಸ್ತಿಯ ನಾಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇನ್ನು ಹರತಾಳಗಳನ್ನು ನಿಷೇಧಿಸುವ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಆಡಳಿತವನ್ನು ಹೇಳಿರುವುದಾಗಿ ವರದಿಯಾಗಿದೆ.