ಬೆಂಗಳೂರು, ಸೆ 23 (DaijiworldNews/MS): ಪಿಎಫ್ ಐ ಯನ್ನು ನಿಷೇಧಿಸಲು ಇದು ಸಕಾಲ ಹೀಗಾಗಿ ಬಿಜೆಪಿಯವರು ಇನ್ನಾದರೂ ನೆಪ ಹೇಳುವ ಬದಲು ಪಿಎಫ್ ಐ ಸಂಘಟನೆಯನ್ನು ನಿಷೇಧಿಸಲಿ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸೇರಿದಂತೆ ದೇಶದ ಹಲವೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಿಎಫ್ ಐ ಕಚೇರಿಯ ಮೇಲೆ ದಾಳಿ ಮಾಡಿ ಹಲವರನ್ನು ಬಂಧಿಸಿದ್ದಾರೆ. ಭಯೋತ್ಪಾದನೆ, ದೇಶ ವಿರೋಧಿ ಚಟುವಟಿಕೆ, ವಿದೇಶಿ ಹಣವನ್ನು ಉಗ್ರಕೃತ್ಯಕ್ಕೆ ಬಳಸಿರುವ ಆರೋಪ ಎಫ್ ಐ ಮೇಲಿದೆ. ಹಾಗಾಗಿ ಪಿಎಫ್ ಐ ಯನ್ನು ನಿಷೇಧಿಸಲು ಇದು ಸಕಾಲ.ಬಿಜೆಪಿಯವರು ಇನ್ನಾದರೂ ನೆಪ ಹೇಳುವ ಬದಲು ಪಿಎಫ್ ಐ ಸಂಘಟನೆಯನ್ನು ನಿಷೇಧಿಸಲಿ ಎಂದು ಒತ್ತಾಯಿಸಿದ್ದಾರೆ
ಯಾವುದೇ ಸಂಘಟನೆ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿದ್ದರೆ ಆ ಸಂಘಟನೆಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಕರ್ತವ್ಯ. ಕೆಲವು ಗಲಭೆಗಳಾದಾಗ ಬಿಜೆಪಿಯವರು ಪಿಎಫ್ ಐ ಸಂಘಟನೆಯ ವಿರುದ್ಧ ಬೊಟ್ಟು ತೋರಿಸಿ ದೇಶದ್ರೋಹದ ಆರೋಪ ಮಾಡುತ್ತಾರೆ, ನಂತರ ಸುಮ್ಮನಾಗುತ್ತಾರೆ.ವೃಥಾ ಆರೋಪ ಮಾಡುವ ಬದಲು ಈಗಲಾದರೂ ಪಿಎಫ್ ಐ ಸಂಘಟನೆ ನಿಷೇಧಿಸಲಿ ಎಂದು ಆಗ್ರಹಿಸಿದ್ದಾರೆ.