ಮುಂಬೈ, ಸೆ 23 (DaijiworldNews/HR): ಮುಂಬೈನ ಸಾಂತಾಕ್ರೂಜ್ನಲ್ಲಿರುವ ವ್ಯಕ್ತಿಯೊಬ್ಬರು ಅಪರಿಚಿತ ವ್ಯಕ್ತಿಯಿಂದ ಬಾಂಬ್ ಸ್ಫೋಟದ ಬೆದರಿಕೆ ಕರೆ ಸ್ವೀಕರಿಸಿದ್ದಾರೆ ಎನ್ನಲಾಗಿದೆ.
ಬಾಂಬ್ ಸ್ಫೋಟದ ಬೆದರಿಕೆ ಕರೆ ಕುರಿತು ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೊಲೀಸರು ಕರೆ ಬಂದಿರುವ ಸ್ಥಳ ಪತ್ತೆ ಹಚ್ಚುವ ಕಾರ್ಯ ಮುಂದಾಗಿದ್ದಾರೆ.
ಇನ್ನು ಒಂದು ತಿಂಗಳ ಹಿಂದೆ ಕೂಡ ಪಂಚತಾರಾ ಹೋಟೆಲ್ಗೂ ಬಾಂಬ್ ಬೆದರಿಕೆ ಕರೆ ಬಂದಿದ್ದು, ಆ ಸಂದರ್ಭದಲ್ಲಿ ಮುಂಬೈ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದರು.
ಇದೀಗ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 506ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.