ಪುಣೆ, ಸೆ 24 (DaijiworldNews/HR): ಪುಣೆಯ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರು ದೇಶ ವಿರೋಧಿ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗಿದ್ದು, ಅನೇಕರನ್ನು ಬಂಧಿಸಲಾಗಿದೆ.
ಇಡಿ, ಸಿಬಿಐ, ಎನ್ಐಎ, ಪೊಲೀಸ್ ದಾಳಿಗಳ ವಿರುದ್ಧ ಪಿಎಫ್ಐ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ವೇಳೆ ಪಾಕ್ ಪರ ಘೋಷಣೆಗಳನ್ನು ಕೂಗಿದ್ದಾರೆ.
ಇನ್ನು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲವು ಕಾರ್ಯಕರ್ತರನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದು, ಈ ಬಗ್ಗೆ ಪುಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.