ತಿರುವನಂತಪುರ, ಸೆ 25 (DaijiworldNews/HR): ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕರೆ ನೀಡಿದ್ದ ಹರತಾಳದಲ್ಲಿ ಹಿಂಸಾಚಾರ ನಡೆದಿದ್ದು, ಇದು ಪೂರ್ವಯೋಜಿತ ಕೃತ್ಯವಾಗಿದ್ದು, ಅಪರಾಧಿಗಳನ್ನು ಬಿಡುವುದಿಲ್ಲಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹರತಾಳದಿಂದಾಗಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ವ್ಯಾಪಕ ಹಾನಿಯುಂಟಾಗಿದ್ದು, ರಾಜ್ಯಕ್ಕೆ ಭಾರಿ ನಷ್ಟ ಉಂಟಾಗಿದೆ. ಆದರೆ ಹಿಂಸಾಚಾರವನ್ನು ತಡೆಗಟ್ಟಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎಂದರು.
ಇನ್ನು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಿಂಸಾಚಾರದಲ್ಲಿ ತೊಡಗಿದವರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಈಗಾಗಲೇ 281 ಪ್ರಕರಣ ದಾಖಲಾಗಿದ್ದು, 1,013 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.