ಬೆಂಗಳೂರು, ಸೆ 25 (DaijiworldNews/HR): ಶ್ವಾಸಕೋಶದ ಸೋಂಕಿನ ಕಾರಣದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಸ್.ಎಂ ಕೃಷ್ಣ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಸದ್ಯ ಸುಧಾರಣೆ ಕಂಡಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಶನಿವಾರ ರಾತ್ರಿ ಜ್ವರ ಕಾಣಿಸಿಕೊಂಡ ಕಾರಣ ಎಸ್.ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನಿಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ವರದಿಯಾಗಿದೆ.