ಬೆಂಗಳೂರು, ಸೆ 25 (DaijiworldNews/HR): ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರು ಸೇರಿಕೊಂಡಿರುವ ಕೂಟಕ್ಕೆ ಇರುವ ಹೆಸರೇ ಬಿಜೆಪಿ ಎಂದು ಕಾಂಗ್ರೆಸ್ ಪಕ್ಷವು ಭಾರತೀಯ ಜನತಾ ಪಾರ್ಟಿ ವಿರುದ್ದ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬೇಟಿ ಬಚಾವ್ ಆಗಬೇಕಿರುವುದು ಬಿಜೆಪಿಗರಿಂದ ಎಂಬುದು ಕರ್ನಾಟಕದಿಂದ, ಉತ್ತರ ಪ್ರದೇಶ, ಉತ್ತರಖಾಂಡದವರೆಗೂ ಬಿಜೆಪಿಗರು ನಿರೂಪಿಸಿದ್ದಾರೆ. ಹೆಣ್ಣುಮಕ್ಕಳನ್ನು ಪೀಡಿಸುವ ಬಿಜೆಪಿ ಸರ್ಕಾರಗೆ ಕೀಚಕ, ದುಶ್ಯಾಸನರು ಆದರ್ಶ ಪುರುಷರೇ ಹೊರತು ರಾಮನಲ್ಲ ಎಂದಿದೆ.
ಇನ್ನು ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರು ಸೇರಿಕೊಂಡಿರುವ ಕೂಟಕ್ಕೆ ಇರುವ ಹೆಸರೇ ಬಿಜೆಪಿ ಎಂದು ವಾಗ್ದಾಳಿ ನಡೆಸಿದೆ.