ಮುಂಬಯಿ, ಸೆ 25 (DaijiworldNews/HR): ಶಿವಾಜಿ ಮಹಾರಾಜರ ನಾಡಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಹಕ್ಕು ಯಾರಿಗೂ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಇದು ದೇಶಭಕ್ತರ ರಾಜ್ಯ.ನಮ್ಮ ಸರಕಾರ ಪುಣೆಯಲ್ಲಿ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ಇನ್ನು ಇಸ್ಲಾಮಿಕ್ ಸಂಘಟನೆಯ ಪಿಎಫ್ಐ ಮುಖಂಡರ ಮೇಲಿಂದ ದಾಳಿ ಮತ್ತು ಬಂಧನದ ನಂತರ ಪುಣೆಯ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭ ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು.
ಪುಣೆಯಲ್ಲಿ ಪಿಎಫ್ಐ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಿರುವುದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯ ಎಂದು ಆದಿತ್ಯ ಠಾಕ್ರೆ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.