ಮೈಸೂರು, ಸೆ 25 (DaijiworldNews/DB): ರಾಹುಲ್ ಗಾಂಧಿ ರಾಜ್ಯಕ್ಕೆ ಬಂದರೆ ನಮಗೇನು ತೊಂದರೆಯಿಲ್ಲ. ಅವರು ಬಂದರೆ ರಾಜ್ಯದಲ್ಲಿ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ಭಾರತ್ ಜೋಡೋ ಅಭಿಯಾನದ ಸಲುವಾಗಿ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರು ಪ್ರಚಾರ ಮಾಡಿದ ಕಡೆಯೆಲ್ಲಾ ಬಿಜೆಪಿ ಅಧಿಕಾರ ಪಡೆದಿದೆ. ಹೀಗಾಗಿ ಅವರು ರಾಜ್ಯಕ್ಕೆ ಬಂದರೆ ನಮಗೆ ಯಾವುದೇ ತೊಂದರೆ ಇಲ್ಲ. ಅವರು ರಾಜ್ಯಕ್ಕೆ ಬಂದರೆ ಕಮಲ ಅರಳುವುದು ನಿಶ್ಚಿತ ಎಂದರು.
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಮೈಸೂರಿಗೆ ಆಗಮಿಸಿದ್ದಾರೆ.