ನವದೆಹಲಿ, ಸೆ 26 (DaijiworldNews/DB): 10 ವರ್ಷದ ಬಾಲಕನೊಬ್ಬನ ಮೇಲೆ ಆತನ ಮೂವರು ಸ್ನೇಹಿತರು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಖಾಸಗಿ ಅಂಗಕ್ಕೆ ರಾಡ್ ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ಈಶಾನ್ಯ ದೆಹಲಿಯ ನ್ಯೂ ಸೀಲಂಪುರ್ ಪ್ರದೇಶದಲ್ಲಿ ನಡೆದಿದೆ.
ಸೆಪ್ಟೆಂಬರ್ 18ರಂದು ಘಟನೆ ನಡೆದಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಾಲಕನ ತಾಯಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಪುತ್ರನನ್ನಯ ಆತನ ಮೂವರು ಸ್ನೇಹಿತರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಆತ ಇದಕ್ಕೆ ವಿರೋಧಿಸಿದಾಗ ದೊಣ್ಣೆ, ಇಟ್ಟಿಗೆಗಳಿಂದ ಥಳಿಸಿದ್ದಾರೆ. ಅಲ್ಲದೆ ಖಾಸಗಿ ಅಂಗಕ್ಕೆ ರಾಡ್ ಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ದೆಹಲಿ ಮಹಿಳಾ ಆಯೋಗವು ದೂರು ದಾಖಲಿಸಿಕೊಂಡಿದ್ದು, ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೊಬ್ಬನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.