ನವದೆಹಲಿ, ಸೆ.26 (DaijiworldNews/HR): 200 ಕೋಟಿ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಇಂದು ಪಟಿಯಾಲ ನ್ಯಾಯಾಲಯಕ್ಕೆ ಹಾಜರಾಗಿದ್ದು, ಅವರಿಗೆ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಅವರನ್ನು ಇತ್ತೀಚೆಗೆ ದೆಹಲಿ ಪೊಲೀಸರ ಇಒಡಬ್ಲ್ಯೂ ಪ್ರಶ್ನಿಸಿದ್ದು, 200 ಕೋಟಿ ರೂ.ಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ಸೋಮವಾರ ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರಾಗಿದ್ದರು.