ಗುವಾಹಾಟಿ, ಸೆ 26 (DaijiworldNews/MS): ’ ಕಾಜಿರಂಗ ರಾಷ್ಟ್ರೀಯ ಉದ್ಯಾನವನದೊಳಗೆ ರಾತ್ರಿ ವೇಳೆ ಸಫಾರಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸದ್ಗುರು ಜಗ್ಗಿ ವಾಸುದೇವ್ , ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಹಾಗೂ ರಾಜ್ಯ ಪ್ರವಾಸೋದ್ಯಮ ಸಚಿವ ಜಯಂತ ಮಲ್ಲ ಬರುವಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಫ್ಐಆರ್ ದಾಖಲಿಸಲಾಗಿದೆ.
1972 ರ ವನ್ಯಜೀವಿ (ರಕ್ಷಣೆ) ಕಾಯಿದೆಯನ್ನು ಉಲ್ಲಂಘಿಸಿ, ಅವರು ನಿಗದಿತ ಭೇಟಿ ಸಮಯವನ್ನು ಮೀರಿ ಉದ್ಯಾನವನಕ್ಕೆ ಪ್ರವೇಶಿಸಿದ್ದಾರೆ ಎಫ್ಐಆರ್ ನಲ್ಲಿ ದೂರಲಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರು ಗೋಲಾಘಾಟ್ ಜಿಲ್ಲೆಯ ಬೊಕಾಖಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
ಆದರೆ, ರಾಷ್ಟ್ರೀಯ ಉದ್ಯಾನವನಕ್ಕೆ ರಾತ್ರಿ ಸಫಾರಿಗಾಗಿ ಪ್ರವೇಶಿಸುವ ಮೂಲಕ ವನ್ಯಜೀವಿ ಸಂರಕ್ಷಣಾ ಕಾನೂನನ್ನು ಉಲ್ಲಂಘಿಸಿರುವ ಆರೋಪಗಳನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಿರಾಕರಿಸಿದ್ದಾರೆ.