ನವದೆಹಲಿ, ಸೆ.26 (DaijiworldNews/HR): ಹಿರಿಯ ರಾಜಕಾರಣಿ, ಜಮ್ಮು ಮತ್ತು ಕಾಶ್ಮೀರಾದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಇಂದು ಜಮ್ಮುವಿನಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಿದ್ದು, ಅದಕ್ಕೆ 'ಡೆಮಾಕ್ರಟಿಕ್ ಆಜಾದ್ ಪಾರ್ಟಿ' ಎಂದು ನಾಮಕರಣ ಮಾಡಿರುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿರುವ ಆಜಾದ್, ನನ್ನ ಹೊಸ ಪಕ್ಷಕ್ಕಾಗಿ ಸುಮಾರು 1,500 ಹೆಸರುಗಳನ್ನು ಉರ್ದು, ಸಂಸ್ಕೃತದಲ್ಲಿ ನಮಗೆ ಕಳುಹಿಸಲಾಗಿದ್ದು, ಹಿಂದಿ ಮತ್ತು ಉರ್ದುವಿನ ಮಿಶ್ರಣ 'ಹಿಂದೂಸ್ತಾನಿ'. ಈ ಹೆಸರು ಪ್ರಜಾಪ್ರಭುತ್ವ, ಶಾಂತಿಯುತ ಮತ್ತು ಸ್ವತಂತ್ರವಾಗಿರಬೇಕು ಎಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಆಗಸ್ಟ್ 26 ರಂದು ಕಾಂಗ್ರೆಸ್ ತೊರೆದ ಬಳಿಕ ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ 'ಡೆಮಾಕ್ರಟಿಕ್ ಆಜಾದ್ ಪಾರ್ಟಿ' ಎಂಬ ಹೊಸ ಪಕ್ಷವನ್ನು ಪ್ರಾರಂಭಿಸಿದ್ದಾರೆ.