ಮೈಸೂರು, ಸೆ 26 (DaijiworldNews/MS): ಕಾಂಗ್ರೆಸ್ನ ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಮಲ ಅರಳಿದೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ’ಮೋದಿ ಹೋದ ಕಡೆಯಲ್ಲಿ ಬಿಜೆಪಿ ಸೋತಿದೆ ’ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಮಲ ಅರಳಿದೆ. ಅವರು ನಡೆಸುತ್ತಿರುವ ‘ಭಾರತ್ ಜೋಡೊ’ ಯಾತ್ರೆಯಿಂದ ನಮಗೆ ವ್ಯತಿರಿಕ್ತ ಪರಿಣಾಮವೇನೂ ಆಗುವುದಿಲ್ಲ ಎಂಬ ಸಿಎಂ ಹೇಳಿಕೆಯ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ತಿಯಿಸಿದ ಅವರು, "ಪಂಜಾಬ್, ತೆಲಂಗಾಣ, ಕೇರಳದಲ್ಲಿ ಮೋದಿ ಹೋಗಿದ್ದರು. ಅಲ್ಲೆಲ್ಲಾ ಬಿಜೆಪಿ ಸೋತಿಲ್ವಾ? ಅವರು ಕೂಡ ಸೋಲುತ್ತಾರೆ. ಇದು ಕೇವಲ ರಾಜಕಾರಣಕ್ಕಾಗಿ ನೀಡುತ್ತಿರುವ ಹೇಳಿಕೆ" ಎಂದು ಸಿಎಂ ಬೊಮ್ಮಾಯಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೊಂದು ಡರ್ಟಿ ಪಾಲಿಟಿಕ್ಸ್, ನಾವು ಈ ರೀತಿ ಕೀಳು ಮಟ್ಟದ ರಾಜಕಾರಣ ಮಾಡಿಲ್ಲ. ಬಿಜೆಪಿ ಸರ್ಕಾರದವರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು. ಕಾಂಗ್ರೆಸ್ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆದರೆ ಅವರು ಮಹಾತ್ಮಗಾಂಧಿ ಕೊಂದವರನ್ನು ಇವರು ಆರಾಧಿಸುತ್ತಾರೆ ಎಂದು ಕಿಡಿಕಾರಿದರು.