ಉತ್ತರ ಪ್ರದೇಶ, ಸೆ.26 (DaijiworldNews/HR): ಕೆರೆಗೆ ಟ್ರಾಕ್ಟರ್ ಪಲ್ಟಿಯಾಗಿ 10 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಕ್ನೋ ವ್ಯಾಪ್ತಿಯಲ್ಲಿ ನಡೆದಿದೆ.
ಈ ಅವಘಢದಲ್ಲಿ 10 ಸಾವನ್ನಪ್ಪಿದ್ದು 37 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು 10 ಮಂದಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದು, ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.