ನವದೆಹಲಿ, ಸೆ.26 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಂದು ಟೋಕಿಯೋಗೆ ತೆರಳಲಿದ್ದಾರೆ.
ಟೋಕಿಯೋಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೋದಿ ಅವರು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.
ಇನ್ನು ಜುಲೈ 10 ರಂದು ಹೌಸ್ ಆಫ್ ಕೌನ್ಸಿಲರ್ಸ್ ಚುನಾವಣೆಗೂ ಮುನ್ನ ಪಶ್ಚಿಮ ಜಪಾನ್ನಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದಾಗ ಜುಲೈ 8 ರಂದು ಪ್ರಧಾನಿ ಅಬೆ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.