ಶಿವಮೊಗ್ಗ, ಸೆ 27 (DaijiworldNews/MS): ರಾಜ್ಯ ಪೊಲೀಸರ ಸಹಾಯದೊಂದಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರಾಜ್ಯದ ಹಲವೆಡೆ ದಾಳಿ ನಡೆಸಿ, ಹಲವು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆಯುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, "ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು , ಎನ್ಐಎ ದಾಳಿ ವೇಳೆ ಹಲವರಿಂದ ಆತಂಕ ಸೃಷ್ಟಿಗೆ ಯತ್ನಿಸಲಾಗಿದ್ದು, ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ, ಬಂಧಿತರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಸುಮಾರು 40ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದ್ದು, 75ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.