ಜಮ್ಮು ಕಾಶ್ಮೀರ, ಸೆ 27 (DaijiworldNews/HR): ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ನಲ್ಲಿ ನಡೆದಿದೆ.
ಹತ್ಯೆಯಾದ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದ್ದು, ಆತನಿಂದಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಎಂ ಜೊತೆ ನಂಟು ಹೊಂದಿರುವ ವಿದೇಶಿ ಪಾಕಿಸ್ತಾನಿ ಭಯೋತ್ಪಾದಕ ಈತನಾಗಿದ್ದು, ಆತನಿಂದ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.