ಚಂದ್ರಗಿರಿ, ಸೆ 27 (DaijiworldNews/MS): ಮರ್ಸಿಡಿಸ್ ಬೆಂಜ್ ಕಾರಿಗೆ ಟ್ರ್ಯಾಕ್ಟರ್ ಢಿಕ್ಕಿ ಹೊಡೆದು ಇಬ್ಬಾಗವಾದ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿಯ ಚಂದ್ರಗಿರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮುಂದಿನಿಂದ ಟ್ರ್ಯಾಕ್ಟರ್ ರಾಂಗ್ ಸೈಡ್ ಗೆ ಬಂದು ಮರ್ಸಿಡಿಸ್ ಬೆಂಜ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಟ್ರ್ಯಾಕ್ಟರ್ ಇಬ್ಬಾಗವಾಗಿದ್ದು, ಮರ್ಸಿಡಿಸ್ ಕಾರಿನ ಮುಂಭಾಗವೂ ಜಜ್ಜಿ ಹೋಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಕಾರಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.