ತಮಿಳುನಾಡು, ಸೆ 27 (DaijiworldNews/HR): ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರ ಪ್ರತಿಮೆಯನ್ನು ಚೆನ್ನೈನ ಟಿ ನಗರ ಪ್ರದೇಶದ ಜಿಎನ್ ಚೆಟ್ಟಿ ರಸ್ತೆಯಲ್ಲಿ ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.
ಎಂಜಿ ರಾಮಚಂದ್ರನ್ ಅವರ ಪ್ರತಿಮೆಯ ಮೂಗು ಮುರಿದಿರುವುದು ಕಂಡುಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಘಟನೆಯ ಕುರಿತಂತೆ ಎಚ್ಚೆತ್ತ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.
ಇನ್ನು ತನಿಖಾಧಿಕಾರಿಗಳು ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪ್ರದೇಶದಿಂದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದಾರೆ ಎನ್ನಲಾಗುತ್ತಿದೆ.