ನವದೆಹಲಿ, ಸೆ 27 (DaijiworldNews/MS): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಸಹಸಂಘಟನೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳವರೆಗೆ ನಿಷೇಧಿಸಲಾಗಿದೆ ಅಥವಾ ಕಾನೂನುಬಾಹಿರ ಸಂಘ ಎಂದು ಘೋಷಿಸಲಾಗಿದೆ.
ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್ (ಆರ್ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್ಸಿಎಚ್ಆರ್ಒ, ನ್ಯಾಷನಲ್ ವುಮೆನ್ಸ್ ಫ್ರಂಟ್ (ಎನ್ಡಬ್ಲ್ಯೂಎಫ್), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸೇರಿದಂತೆ ಎಂಟು ಸಂಘಟನೆಗಳನ್ನು ನಿಷೇಧಿಸಲಾಗಿದೆ
ಈ ಸಂಘಟನೆ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ದುರ್ಬಲಗೊಳಿಸಲು ಮತ್ತು ಸಂಪೂರ್ಣ ಅಗೌರವವನ್ನು ತೋರಿಸಲು ಕೆಲಸ ಮಾಡುವ ಸಮಾಜದ ನಿರ್ದಿಷ್ಟ ವರ್ಗವನ್ನು ಆಮೂಲಾಗ್ರಗೊಳಿಸಲು ರಹಸ್ಯ ಕಾರ್ಯಸೂಚಿಯನ್ನು ಅನುಸರಿಸುತ್ತಿದ್ದಾರೆಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದಕ್ಕೂ ಮುಂಚೆ ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್ಎ) ದಾಳಿ ನಡೆಸಿತ್ತು.