ಬೆಂಗಳೂರು, ಸೆ 28 (DaijiworldNews/MS): ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧದ ಕುರಿತು ಪ್ರತಿಕ್ರಿಯಿಸಿರುವ , ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ , " ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ" ಎಂದು ಹೇಳಿದ್ದಾರೆ.
ಯಾವುದೇ ಸಂಘಟನೆಯಾದರೂ ಅದನ್ನು ನಿಷೇಧಿಸಬೇಕು. ಆರೆಸ್ಸೆಸ್ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಾಧ್ಯಮದೊಂದಿಗೆ ಜೊತೆ ಗುರುವಾರ ಮಾತನಾಡಿದ ಅವರು, ‘ಯಾರು ಸಮಾಜಕ್ಕೆ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ. ದ್ವೇಷದ ರಾಜಕಾರಣ ಮಾಡಿದರೆ ತಕ್ಕ ಕ್ರಮ ಕೈಗೊಳ್ಳಲಿ ಜರುಗಿಸಲಿ’ ಎಂದು ಹೇಳಿದ್ದಾರೆ