ಬೆಂಗಳೂರು, ಸೆ 28 (DaijiworldNews/MS): ಪಿಎಫ್ ಐ ಹಾಗೂ ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಂತಿದ್ದು , ಬಿಜೆಪಿಯೂ ಎಸ್ಡಿಪಿಐ ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಎಂದು ಪ್ರಶ್ನೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ " ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ ಎಸ್ಡಿಪಿಐ ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ. ಎಸ್ಡಿಪಿಐಗೂ ಬಿಜೆಪಿಗೂ ಇರುವುದು "ಯಾವ ಜನ್ಮದ ಮೈತ್ರಿ"?
ಪಿಎಫ್ ಐ ಜೊತೆಗೆ ಇದ್ದ ಬಿಜೆಪಿಯ ಹೊಂದಾಣಿಕೆ ಎಂತದ್ದು? ಈ ಆಯಾಮದಲ್ಲಿ ಎನ್ಐಎ ತನಿಖೆ ನಡೆಸಬೇಕಿದೆ ಎಂದು ಹೇಳಿದೆ.
ಪಿಎಫ್ ಐ ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು.ಪಿಎಫ್ ಐ ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು, ಆ ಬಗ್ಗೆಯೂ ತನಿಖೆಯಾಗಬೇಕು. ಪಿಎಫ್ ಐ ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು ಎಂದು ಕಾಂಗ್ರೆಸ್ ಹೇಳಿದೆ.