ನವದೆಹಲಿ, ಸೆ.30 (DaijiworldNews/HR): ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬನ ಮೇಲೆ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಗುಂಡು ಹಾರಿಸಿರುವ ಘಟನೆ ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ನಡೆದಿದೆ.
ಗುರುವಾರ ರಾತ್ರಿ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದು, ಬಳಿಕ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ.
ಇನ್ನು ಘಟನೆಯಲ್ಲಿ ನೌಮನ್ ಚೌಧರಿ ತಲೆಗೆ ಗಂಭೀರವಾದ ಗಾಯವಾಗಿದ್ದು, ಕೂಡಲೇ ಆತನನ್ನು ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡಿನ ದಾಳಿಯಿಂದಾಗಿ ಆಸ್ಪತ್ರೆಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.