ಜೈಪುರ,ಅ 01 (DaijiworldNews/MS): ಪ್ರಧಾನಿ ನರೇಂದ್ರ ಮೋದಿ ಅವರು ತಾವು ಕೇವಲ ಪ್ರಧಾನಿಯಲ್ಲ, ತಾವೂ ಸಹ ಸಾಮಾನ್ಯರಲ್ಲಿ ಸಾಮಾನ್ಯರು ಎಂಬುವುದನ್ನು ಎಂಬುದನ್ನು ಹಲವಾರು ಸಂದರ್ಭಗಳಲ್ಲಿ ಸಾಬೀತುಪಡಿಸಿದ್ದಾರೆ.
ಸೆ. ೩೦ ರಂದು ರಾಜಸ್ಥಾನದ ಅಬು ರಸ್ತೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಡವಾಗಿ ಸ್ಥಳಕ್ಕೆ ಬಂದಿದ್ದರು. ಈ ವೇಳೆ ಅವರು ತೆಗೆದುಕೊಂಡ ನಿರ್ಧಾರ ಎಲ್ಲರ ಗಮನ ಸೆಳೆದಿದೆ.
ಶುಕ್ರವಾರ, ಪ್ರಧಾನಿ ಮೋದಿ ಅವರು ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಕೆಯಲ್ಲಿನ ನಿಯಮವನ್ನು ಉಲ್ಲಂಘಿಸಲು ಬಯಸದ ಕಾರಣ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಮೈಕ್ ಅನ್ನು ಬಳಸಲಿಲ್ಲ.
'ನಾನು ಇಲ್ಲಿಗೆ ತಲುಪಲು ತಡವಾಯಿತು. ಈಗಾಗಲೇ ರಾತ್ರಿ 10 ಗಂಟೆಯಾಗಿದೆ. ನಾನು ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು ಎಂದು ನನ್ನ ಆತ್ಮಸಾಕ್ಷಿಯು ಹೇಳುತ್ತದೆ. ಹಾಗಾಗಿ ನಿಮ್ಮ ಮುಂದೆ ನಾನು ಕ್ಷಮೆಯಾಚಿಸುತ್ತೇನೆ' ಎಂದು ಮೋದಿ ಧ್ವನಿವರ್ಧಕವಿಲ್ಲದೆ ಸಭೆಯನ್ನುದ್ದೇಶಿಸಿ ಮಾತನಾಡಿದರು